೧೯೯೬

ಪ್ರಮುಖ ಘಟನೆಗಳು

ಮರಣ

ಗಿರೀಶ್ ಕಾರ್ನಾಡ್

ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

ಗೀತಾ (ನಟಿ)

ಗೀತಾ - ದಕ್ಷಿಣ ಭಾರತದ ಪ್ರಮುಖ ಚಿತ್ರನಟಿಯರಲ್ಲೊಬ್ಬರು. ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಜಯಮಾಲಾ

ಡಾ. ಜಯಮಾಲ ಒಬ್ಬ ಕನ್ನಡ ಚಿತ್ರನಟಿ. ಗೀತಪ್ರಿಯ ನಿರ್ದೇಶನದ "ಕಾಸ್ ದಾಯೆ ಕಂಡನೆ' ತುಳು ಚಿತ್ರದ ಮೂಲಕ ಸಿನಿಮಾ ಜಗತ್ತು ಪ್ರವೇಶಿಸಿದ ಜಯಮಾಲಾ ನಿರ್ಮಾಪಕಿಯೂ ಆಗಿದ್ದಾರೆ.

ಧಾರವಾಡ (ಲೋಕ ಸಭೆ ಚುನಾವಣಾ ಕ್ಷೇತ್ರ)

ಧಾರವಾಡ ಕರ್ನಾಟಕದ ಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು.

ನೀಲಂ ಸಂಜೀವ ರೆಡ್ಡಿ

ನೀಲಂ ಸಂಜೀವ ರೆಡ್ಡಿ ೧೯೭೭ - ೧೯೮೨ ಅವಧಿಯಲ್ಲಿ ಭಾರತದ ರಾಷ್ಟ್ರಪತಿಗಳಾಗಿದ್ದರು. ಇವರು ಭಾರತದ ಆರನೇ ರಾಷ್ಟ್ರಪತಿಗಳು, ಇವರು ಅವಿರೋಧವಾಗಿ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾದ ಭಾರತದ ಏಕೈಕ ವ್ಯಕ್ತಿ.

ಇವರು ಆಂಧ್ರ ಪ್ರದೇಶ ರಾಜ್ಯ ಜಿಲ್ಲೆಯ ಅನಂತಪುರ ಜಿಲ್ಲೆಯ ಇಲ್ಲೂರು ಹಳ್ಳಿಯಲ್ಲಿ ಹುಟ್ಟಿದರು. ೧೯೬೪ರಲ್ಲಿ ಕೇಂದ್ರ ಸರಕಾರದ ಮಂತ್ರಿ ಮಂಡಲದಲ್ಲಿ ಉಕ್ಕು ಮತ್ತು ಗಣಿ ಖಾತೆಯ ಸಚಿವರಾದರು. ಮುಂದೆ ೧೯೬೬ ರಲ್ಲಿ ಸಾರಿಗೆ. ನಾಗರಿಕ ವಿಮಾನಯಾನ, ಪ್ರವಾಸೋದ್ಯಮ ಮತ್ತು ನೌಕಾ ಸಾರಿಗೆಯ ಸಚಿವರಾಗಿದ್ದರು. ೧೯೬೭ ರಲ್ಲಿ ಲೋಕಸಭೆಯ ಸಭಾಪತಿಯಾಗಿ ಸೇವೆ ಸಲ್ಲಿಸಿ ಅಭೂತಪೂರ್ವ ಮೆಚ್ಚುಗೆಯನ್ನು ಗಳಿಸಿದರು..

1969 ರಲ್ಲಿ, ಅಂದಿನ ಭಾರತದ ರಾಷ್ಟ್ರಪತಿಯಾದ ಡಾ.ಜಾಕೀರ್ ಹುಸೇನರ ಸಾವಿನ ನಂತರ ಸಂಜೀವ ರೆಡ್ಡಿಯವರನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಹೆಸರಿಸಲಾಯಿತು. ಪಕ್ಷದ ಅಭ್ಯರ್ಥಿಯಾಗಿ ಮತ್ತೊಂದು ಹುದ್ದೆಗಾಗಿ ಸ್ಪರ್ಧಿಸುವಾಗ, ಸದ್ಯ ಇರುವ ಹುದ್ದೆಯ ಲಾಭ ಪಡೆಯಬಾರದೆಂದು ತಮ್ಮ ಲೋಕಸಭಾ ಸಭಾಪತಿ ಪದವಿಗೆ ಚುನಾವಣೆಯ ಮೊದಲೇ ರಾಜೀನಾಮೆ ಕೊಟ್ಟರು. ಆದರೆ ಇಂದಿರಾ ಗಾಂಧಿ, ಸಂಜೀವ ರೆಡ್ಡಿ ತನ್ನ ಮಾತಿನಂತೆ ನಡೆಯದ ತುಂಬಾ ಸ್ವತಂತ್ರ ಮನೋಭಾವದ ವ್ಯಕ್ತಿ ಎಂದು ತಿಳಿದು, ಪಕ್ಷದ ಮತದಾರರನ್ನು ಪಕ್ಷದ ಅಭ್ಯರ್ಥಿಗೆ ಮತ ಹಾಕುವಂತೆ ಕೇಳುವ ಬದಲು, ತಮ್ಮ ಆತ್ಮ ಸಾಕ್ಷಿಯ ಪ್ರಕಾರ ಮತದಾನ ಮಾಡಲು ಅವಕಾಶ ನೀಡುವ ನಿಲುವು ತೆಗೆದುಕೊಂಡರು. ಇದರ ಅರ್ಥ ವಾಸ್ತವವಾಗಿ ವಿ.ವಿ.ಗಿರಿ ಅವರಿಗೆ ತನ್ನ ಬೆಂಬಲವನ್ನು ಸೂಚಿಸುವುದಾಗಿತ್ತು. ಆ ಸಂದರ್ಭದಲ್ಲಿ ಸಂಜೀವ ರೆಡ್ಡಿ ಚುನಾವಣೆಯಲ್ಲಿ ಸೋತರು. ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದಿ ತಮ್ಮ ಗ್ರಾಮಕ್ಕೆ ಮರಳಿ ತಮ್ಮ ತಂದೆಯ ಉದ್ಯೋಗವಾದ ಕೃಷಿಯಲ್ಲಿ ತೊಡಗಿದರು.

ಅವರು ೧೯೭೫ ರಲ್ಲಿ ಶ್ರೀ ಜಯಪ್ರಕಾಶ್ ನಾರಾಯಣ್ ಜೊತೆಗೆ ಮತ್ತೆ ಸಕ್ರಿಯ ರಾಜಕೀಯಕ್ಕೆ ಮರಳಿದರು. ಮಾರ್ಚ್ ೧೯೭೭ ರಲ್ಲಿ, ಅವರು ಜನತಾ ಪಕ್ಷದ ಅಭ್ಯರ್ಥಿಯಾಗಿ ಆಂಧ್ರ ಪ್ರದೇಶದ ನಂದ್ಯಾಲ ಕ್ಷೇತ್ರದಿಂದ ಲೋಕ ಸಭೆಗೆ ಸ್ಪರ್ಧಿಸಿದರು. ಅವರು ಆಂಧ್ರ ಪ್ರದೇಶದಿಂದ ಆಯ್ಕೆಯಾದ ಏಕೈಕ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅವರು ಸರ್ವಾನುಮತ ದಿಂದ ೨೬ ಮಾರ್ಚ್ ೧೯೭೭ ರಂದು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದರು. ಅವರನ್ನು ಈವರೆಗೆ ಭಾರತೀಯ ಸಂಸತ್ತಿನ ಲೋಕಸಭೆ ಕಂಡ ಅತ್ಯುತ್ತಮ ಸ್ಪೀಕರ್ ಎಂದು ಬಣ್ಣಿಸಲಾಗಿದೆ.

ಅವರು ಜುಲೈ ೧೯೭೭ ರಲ್ಲಿ ರಾಷ್ಟ್ರಪತಿಯಾಗಿ ಆಯ್ಕೆಯಾದರು. ಅವರು ಅತ್ಯಂತ ಕಿರಿಯ ವಯಸ್ಸಿನ ರಾಷ್ಟ್ರಪತಿಯೂ ಭಾರತದ ಈವರೆಗಿನ ಇತಿಹಾಸದಲ್ಲಿ ಅವಿರೋಧವಾಗಿ ಆಯ್ಕೆಯಾದ ಏಕೈಕ ರಾಷ್ಟ್ರಪತಿಯೂ ಹೌದು.

ಅವರು ೧೯೯೬ ರಲ್ಲಿ ಬೆಂಗಳೂರಿನಲ್ಲಿ ತೀರಿಕೊಂಡರು.

ಪ್ರಣಬ್ ಮುಖೆರ್ಜೀ

ಪ್ರಣಬ್ ಮುಖರ್ಜಿ (ಬಂಗಾಳಿ:প্রণব কুমার মুখোপাধ্যায় ಹುಟ್ಟಿದ್ದು ಡಿಸೆಂಬರ್ ೧೧, ೧೯೩೫, ಭಾರತದ ಪಶ್ಚಿಮ ಬಂಗಾಲದಲ್ಲಿ. ಇವರು ಭಾರತದ ೧೩ನೇ ರಾಷ್ಟ್ರಪತಿ ಮತ್ತು ವಿತ್ತ ಮಂತ್ರಿಯಾಗಿದ್ದರು. ಇವರು (೧೫ನೇ) ಲೋಕ ಸಭೆಯ (ಭಾರತ ಸಂಸತ್ತಿನ ಕೆಳಮನೆ) ನಾಯಕ ಹಾಗು ಕಾಂಗ್ರೆಸ್ ಕಾರ್ಯ ಸಮಿತಿಯ ಸದಸ್ಯ ಕೂಡ (ಸಿ.ಡಬ್ಲ್ಯೂ.ಸಿ) ಆಗಿದ್ದರು. ಇವರು ಪ್ರಸಕ್ತ ಭಾರತ ದೇಶದ ರಾಷ್ಟ್ರಪತಿ ಆಗಿದ್ದಾರೆ

ಇವರು ಕಲ್ಕತ್ತ ವಿಶ್ವವಿದ್ಯಾಲಯದಿಂದ ನ್ಯಾಯಶಾಸನದಲ್ಲಿ ಮಾಸ್ಟರ್ಸ್ ಪದವಿಯನ್ನು ಪಡೆದಿದ್ದಾರೆ. ಇವರು ವಕೀಲ ಹಾಗು ಕಾಲೇಜಿನ ಉಪಾಧ್ಯಾಯರಾಗಿ ಕಾರ್ಯ ನಿರ್ವಹಿಸಿದ್ದಾರೆ.ಇವರು ಗೌರವಾರ್ಥ ಡಿ.ಲಿಟ್ಟ್ ಕೂಡ ಹೊಂದಿದ್ದಾರೆ.

ಭಾರತದ ಪ್ರಧಾನ ಮಂತ್ರಿ

ಭಾರತದ ಪ್ರಧಾನ ಮಂತ್ರಿಗಳು ಲೋಕಸಭೆಯಲ್ಲಿ ಬಹುಮತ ಹೊಂದಿರುವ ರಾಜಕೀಯ ಪಕ್ಷದಿಂದ ಅಥವಾ ಪಕ್ಷಗಳ ಮೈತ್ರಿತ್ವದಿಂದ ಆರಿಸಲ್ಪಟ್ಟ ನಾಯಕರು ಪ್ರಧಾನ ಮಂತ್ರಿಗಳಾಗುವರು. ಅವರು ಭಾರತ ಸರ್ಕಾರದ ಕಾರ್ಯಾಂಗದ ಮುಖ್ಯಸ್ಥರು ಮತ್ತು ಶಾಸಕಾಂಗದ ಸದಸ್ಯರಾಗಿರುತ್ತಾರೆ. ಸಾಂವಿಧಾನಿಕವಾಗಿ, ಭಾರತದ ಅಧ್ಯಕ್ಷರ ಪದವಿ ಪ್ರಧಾನ ಮಂತ್ರಿಯ ಪದವಿಗಿಂತ ಮೇಲಿನದ್ದು. ಆದರೆ ಸರ್ಕಾರದ ಚಟುವಟಿಕೆಗಳಲ್ಲಿ ಎಲ್ಲರಿಗಿಂತ ಹೆಚ್ಚು ಪ್ರಭಾವ ಹೊಂದಿರುವ ಪದವಿ ಪ್ರಧಾನ ಮಂತ್ರಿಗಳದ್ದು.

ಭಾರತದ ಪ್ರಸಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಈ ವರೆಗೆ ಒಟ್ಟು ೧೨ ವ್ಯಕ್ತಿಗಳು ಭಾರತ ಪ್ರಧಾನ ಮಂತ್ರಿ ಸ್ಥಾನಕ್ಕೆ ಚುನಾಯಿಸಲ್ಪಟ್ಟಿದ್ದಾರೆ. ಇವರಲ್ಲಿ ಜವಾಹರಲಾಲ್ ನೆಹರು ಒಟ್ಟು ನಾಲ್ಕು ಅವಧಿಗಳಲ್ಲಿ ಪ್ರಧಾನ ಮಂತ್ರಿ ಗಳಾಗಿದ್ದರು. ಇಂದಿರಾ ಗಾಂಧಿ ಮೂರು ಅವಧಿಗಳ ಕಾಲ ಈ ಸ್ಥಾನದಲ್ಲಿದ್ದರೆ, ಅಟಲ್ ಬಿಹಾರಿ ವಾಜಪೇಯಿ ಎರಡು ಅವಧಿಗಳಲ್ಲಿ ಈ ಸ್ಥಾನ ವಹಿಸಿದ್ದಾರೆ. ಗುಲ್ಜಾರಿ ಲಾಲ್ ನಂದಾ ಎರಡು ಬಾರಿ ಹಂಗಾಮಿ ಪ್ರಧಾನಿಯಾಗಿ ಕೆಲಸ ನಿರ್ವಹಿಸಿದ್ದರು. ಡಾ.ಮನಮೋಹನ್ ಸಿಂಗ್ ಮೇ ೨೨, ೨೦೦೪ ಮೇ ೨೬, ೨೦೧೧ ಕಾಂಗ್ರೆಸ್ ಪಕ್ಷ(ಐ)ವರೆಗೆ ೨ ಅವಧಿಗೆ ಪ್ರಧಾನ ಮಂತ್ರಿಯಾಗಿದ್ದರು.

ಮೈನಾವತಿ

ಮೈನಾವತಿ ದಕ್ಷಿಣ ಭಾರತದ ಹೆಸರಾಂತ ಚಲನಚಿತ್ರ ಮತ್ತು ಕಿರುತೆರೆ ಅಭಿನೇತ್ರಿ. ೧೯೫೦ ಮತ್ತು ೧೯೬೦ರ ದಶಕದಲ್ಲಿ ಸಕ್ರಿಯರಾಗಿದ್ದ ಮೈನಾವತಿ ಕನ್ನಡ, ತಮಿಳು ಮತ್ತು ತೆಲುಗು ಭಾಷೆಯ ಸುಮಾರು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ರಾಯರ ಸೊಸೆ(೧೯೫೭), ಅಬ್ಬಾ ಆ ಹುಡುಗಿ(೧೯೫೯), ಅನುರಾಧ(೧೯೬೭), ಶ್ರೀಕೃಷ್ಣದೇವರಾಯ(೧೯೭೦) ಮತ್ತು ಅಳಿಯ ಗೆಳೆಯ(೧೯೭೧) ಚಿತ್ರಗಳಲ್ಲಿನ ವಿಭಿನ್ನ ಪಾತ್ರಗಳಿಗೆ ಸಮರ್ಥವಾಗಿ ಜೀವ ತುಂಬಿ ಕನ್ನಡ ಪ್ರೇಕ್ಷಕರ ನೆಚ್ಚಿನ ಅಭಿನೇತ್ರಿ ಎನ್ನಿಸಿಕೊಂಡಿದ್ದರು. ತಮಿಳಿನ ಬೊಮ್ಮೈ ಕಲ್ಯಾಣಂ(೧೯೫೮), ಮಾಲಯಿಟ್ಟ ಮಂಗೈ(೧೯೫೮) ಮತ್ತು ಕುರವಂಜಿ(೧೯೬೦) ಮೈನಾವತಿ ಅಭಿನಯದ ಗಮನಾರ್ಹ ಚಿತ್ರಗಳಾಗಿವೆ.

ರಾಮಕೃಷ್ಣ

ರಾಮಕೃಷ್ಣ - ೨೦೦ ಕ್ಕೂ ಹೆಚ್ಚಿನ ಸಂಖ್ಯೆಯ ಕನ್ನಡ ಚಿತ್ರಗಳಲ್ಲಿ ನಟಿಸಿರುವ ನಟ.

ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ತಾಲ್ಲೂಕಿನವರು ಇವರು.

ಬಬ್ರುವಾಹನ ಚಿತ್ರದಲ್ಲಿ ಕೃಷ್ಣನ ಪಾತ್ರದ ಮೂಲಕ ಚಿತ್ರರಂಗಕ್ಕೆ ಬಂದರು. ಪುಟ್ಟಣ್ಣ ಕಣಗಾಲ್ ಅವರ ಅಮೃತ ಘಳಿಗೆ,ಮಾನಸ ಸರೋವರ, ರಂಗನಾಯಕಿ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದರು.

ಅಮೃತವರ್ಷಿಣಿ,ಬೆಂಕಿಯಲ್ಲಿ ಅರಳಿದ ಹೂವು ಅವರ ಇತರ ಪ್ರಮುಖ ಚಿತ್ರಗಳು.

‘ರಂಗ ನಾಯಕಿ’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ಶ್ರೇಷ್ಠ ಪೋಷಕ ನಟ, ೧೯೯೮ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ‘ಅಮೃತವರ್ಷಿಣಿ’ ಚಿತ್ರಕ್ಕೆ ೧೯೯೬-೯೭ರಲ್ಲಿ ನಾಕ್‌ಔಟ್‌ ಉದಯ ಚಲನಚಿತ್ರ ಪ್ರಶಸ್ತಿ ಗಳು ಅವರಿಗೆ ಸಿಕ್ಕಿವೆ.

ಗುಬ್ಬಿ ವೀರಣ್ಣ, ಕೆ.ಬಾಲಚಂದರ್, ರಾಜ್ ಕುಮಾರ್, ರಾಜೇಂದ್ರ ಸಿಂಗ್ ಬಾಬು ಅವರೊಂದಿಗೂ ಇವರು ಕೆಲಸಮಾಡಿದ್ದಾರೆ

ವಿ. ಮನೋಹರ್

ವಿ.ಮನೋಹರ್ ರವರು ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕರಲ್ಲಿ ಒಬ್ಬರು.

ಸಂಗೀತ ನಿರ್ದೇಶನದ ಜೊತೆಗೆ ಇವರು ಗೀತ ರಚನೆ, ನಿರ್ದೇಶನ ಹಾಗೂ ನಟನೆಗಳಲ್ಲಿ ತಮ್ಮನು ತೊಡಗಿಸಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಪ್ರಶಸ್ತಿ ಜೊತೆಗೆ ಇವರಿಗೆ ಅನೇಕ ಪ್ರಶಸ್ತಿಗಳು ದೊರಕಿದೆ.

ವಿನಯಾ ಪ್ರಸಾದ್

ವಿನಯಾ ಪ್ರಸಾದ್ ( ಇವರ ಹೆಸರು ವಿನಯಾ ಪ್ರಕಾಶ್ ಎಂದೂ ಕೆಲವೆಡೆ ಬಳಕೆಯಲ್ಲಿದೆ) ದಕ್ಷಿಣ ಭಾರತದ ಜನಪ್ರಿಯ ಚಿತ್ರನಟಿ. ಇವರು ದೂರದರ್ಶನ ವಾಹಿನಿಗಳಲ್ಲಿಯೂ ನಟಿಸುತ್ತಾರೆ. ೧೯೮೮ ರಲ್ಲಿ ಜಿ.ವಿ. ಅಯ್ಯರ್ ರವರ ಮಧ್ವಾಚಾರ್ಯ ಚಿತ್ರದಲ್ಲಿ ಒಂದು ಸಣ್ಣ ಪಾತ್ರದೊಂದಿಗೆ ಚಿತ್ರರಂಗ ಪ್ರವೇಶಿಸಿದರು.ಮುಂದೆ ಅನಂತನಾಗ್ ಎದುರಿಗೆ 'ಗಣೇಶನ ಮದುವೆ' ಚಿತ್ರದಲ್ಲಿ ನಾಯಕಿ ಆದರು. ಚಿತ್ರವು ಯಶಸ್ವಿ ಅಯಿತು . ಮುಂದೆ ಅವರು ಕನ್ನಡ, ತೆಲುಗು,ತಮಿಳು ಮತ್ತು ಮಲಯಾಳಂ ಭಾಷೆಗಳ ೬೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದರು. ಅವರ ಪ್ರಮುಖ ಕನ್ನಡ ಚಿತ್ರಗಳಲ್ಲಿ ನೀನು ನಕ್ಕರೆ ಹಾಲು ಸಕ್ಕರೆ, ಗಣೇಶನ ಮದುವೆ, ಗೌರಿ ಗಣೇಶ , ಮೈಸೂರು ಜಾಣ ಮತ್ತು ಸೂರ್ಯೋದಯ ಸೇರಿವೆ. ಆತಂಕ ( ೧೯೯೩) ಮತ್ತು ಬಣ್ಣದ ಹೆಜ್ಜೆ (೨೦೦೧) ಚಿತ್ರಗಳಲ್ಲಿ ಅವರ ನಟನೆಗಾಗಿ ಕರ್ನಾಟಕ ರಾಜ್ಯದ ಉತ್ತಮನಟಿ ಪ್ರಶಸ್ತಿಗಳು ದೊರಕಿವೆ. ನಾಯಕಿಯಾಗಿ ಯಶಸ್ವೀ ವೃತ್ತಿಯ ನಂತರ ಅವರ ಚಾರಿತ್ರ್ಯಪಾತ್ರಗಳನ್ನು ದಕ್ಷಿಣ ಭಾರತದ ಭಾಷೆಯ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದು ಬೇಡಿಕೆಯಲ್ಲಿರುವ ನಟಿಯಾಗಿದ್ದಾರೆ. ಅವರು ಉತ್ತಮ ಗಾಯಕಿಯೂ ಅಲ್ಲದೆ ನೃತ್ಯಗ್ರಾಮದಲ್ಲಿ ವಸಂತಹಬ್ಬ ಮತ್ತು ಮೈಸೂರು ದಸರಾದಂಥ ಕಾರ್ಯಕ್ರಮಗಳನ್ನು ನಡೆಸಿಯೂ ಕೊಡುತ್ತಾರೆ.

ಇವರು ಉಡುಪಿ ಯಲ್ಲಿ ಹುಟ್ಟಿ ಬೆಳೆದವರು. ಈಗ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.

ವಿಷ್ಣುವರ್ಧನ್ (ನಟ)

ಡಾ. ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ [[೧೯೫೦] | ಮರಣ :ಡಿಸೆಂಬರ್ ೩೦ ೨೦೦೯) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ. ವಿಷ್ಣುವರ್ಧನ್ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು ೨೨೦ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾಗಿದ್ದರು. ಇವರಿಗೆ ಇದ್ದ ಬಿರುದುಗಳು ಸಾಹಸ ಸಿಂಹ, ಅಭಿನಯ ಭಾರ್ಗವ, ಮೈಸೂರು ರತ್ನ

ಶಿವಕುಮಾರ್ ಶರ್ಮಾ

ಪಂಡಿತ್ ಶಿವಕುಮಾರ್ ಶರ್ಮಾ(ಜನನ:ಜನವರಿ ೧೩,೧೯೩೮) ಇವರು ಹಿಂದುಸ್ತಾನಿ ಸಂಗೀತ ಶೈಲಿಯ ಸಂತೂರ್ ವಾದ್ಯದ ವಾದಕರು. ಸಂತೂರ್ ಇದು ಕಾಶ್ಮೀರ ಕೊಳ್ಳದ ಒಂದು ಜಾನಪದ ವಾದ್ಯ, ಇದನ್ನು ಕೆತ್ತಿದ ಕಟ್ಟಿಗೆಯ ತುಂಡುಗಳಿಂದ ನುಡಿಸಲಾಗುತ್ತದೆ.

ಶಿವರಾಜ್‍ಕುಮಾರ್ (ನಟ)

ಡಾ. ಶಿವರಾಜ್‍ಕುಮಾರ್ ಕನ್ನಡದ ಚಿತ್ರನಟ. ಡಾ. ರಾಜ್‍ಕುಮಾರ್ರ ಹಿರಿಯಪುತ್ರ. ಶಿವಣ್ಣ ಎಂದೇ ಹೆಸರಾದ ಶಿವರಾಜ್‍ಕುಮಾರ್, ನಟಿಸಿದ ಮೊದಲ ಮೂರೂ ಚಿತ್ರಗಳು ೧೦೦ ದಿನ ಪ್ರದರ್ಶನ ಕಂಡು ಹ್ಯಾಟ್ರಿಕ್ ಹೀರೋ ಬಿರುದು ಪಡೆದ ಹಿರಿಮೆ ಇವರದ್ದು.

ಸಿತಾರ

ಸಿತಾರ ೧೯೯೦ರ ದಶಕದ ದಕ್ಷಿಣ ಭಾರತದ ಜನಪ್ರಿಯ ಚಲನಚಿತ್ರ ನಟಿ. ಕನ್ನಡ ಮತ್ತು ಮಲಯಾಳಂ ಭಾಷೆಯ ಅನೇಕ ಯಶಸ್ವೀ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಇವರು ತಮಿಳು ಮತ್ತು ತೆಲುಗಿನ ಕೆಲವು ಚಿತ್ರಗಳಲ್ಲು ನಟಿಸಿದ್ದಾರೆ.

ಹಂಸಲೇಖ

ಹಂಸಲೇಖ (ಜನನ: ಜೂನ್ ೨೩, ೧೯೫೧) ಅವರು ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕರಲ್ಲಿ ಒಬ್ಬರು. ಇವರ ಮೂಲ ಹೆಸರು "ಗಂಗರಾಜು". ೧೯೭೩ ರಲ್ಲಿ "ತ್ರಿವೇಣಿ" ಚಿತ್ರದ "ನೀನಾ ಭಗವಂತ" ಹಾಡಿನ ಮೂಲಕ ಗೀತ ರಚನೆಕಾರರಾಗಿ ಚಿತ್ರರಂಗವನ್ನು ಪ್ರವೇಶಿಸಿದ ಇವರು ಇದುವರೆಗೆ ಸಂಗೀತ , ಸಾಹಿತ್ಯ ಒದಗಿಸಿರುವ ಚಿತ್ರಗಳು ಮುನ್ನೂರಕ್ಕೂ ಹೆಚ್ಚು. ಕನ್ನಡ ಮಾತ್ರವಲ್ಲದೆತಮಿಳು, ತೆಲುಗು, ಮಲೆಯಾಳಂ ಭಾಷಾ ಚಿತ್ರಗಳಿಗೂ ಸಂಗೀತ ನೀಡಿದ್ದಾರೆ.

ಹಾವೇರಿ (ಲೋಕ ಸಭೆ ಚುನಾವಣಾ ಕ್ಷೇತ್ರ)

ಹಾವೇರಿ ಕರ್ನಾಟಕದ ಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು. ಈ ಕ್ಷೇತ್ರವನ್ನು ಧಾರವಾಡ ದಕ್ಷಿಣ ಲೋಕಸಭಾ ಕ್ಷೇತ್ರವೆಂದು ಕರೆಯಲ್ಪಡುತ್ತಿತ್ತು. ಇದು ೧೯೭೭ರಲ್ಲಿ ಆಸ್ತಿತ್ವಕ್ಕೆ ಬಂದಿತು.೨೦೦೯ರಲ್ಲಿ ನಡೆದ ಚುನಾವಣೆಯಲ್ಲಿ ಶಿವಕುಮಾರ್ ಚನ್ನಬಸಪ್ಪನವರು ಮೊದಲ ಸಂಸದ ಸದಸ್ಯರಾಗಿ ಆಯ್ಕೆಯಾಗಿದ್ದರು.

ಹೆಚ್.ಡಿ.ದೇವೇಗೌಡ

ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ ೧೨ ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. . 'ಮಣ್ಣಿನ ಮಗ' ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

ಇತರ ಭಾಷೆಗಳು

This page is based on a Wikipedia article written by authors (here).
Text is available under the CC BY-SA 3.0 license; additional terms may apply.
Images, videos and audio are available under their respective licenses.